ಶುಕ್ರವಾರ, ಜನವರಿ 10, 2025
ಲಕ್ಷ್ಮಣ ಬಾಬಶೆಟ್ಟಿ
ಸಾಹಿತಿ ಲಕ್ಷ್ಮಣ ಬಾಬಶೆಟ್ಟಿಯವರು ಬೀದರ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಸಂಬಾಜಿರಾವ ಮತ್ತು ರೇವಮ್ಮಾ ದಂಪತಿಗಳಿಗೆ ದಿನಾಂಕ ೧-೮-೧೯೫೮ರಲ್ಲಿ ಜನಿಸಿದ್ದಾರೆ. ಎಂ.ಎ.ಇAಗ್ಲೀಷ್ ಸ್ನಾತಕೋತ್ತರ ಪದವೀಧರರಾದ ಇವರು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯ ರಚನೆಯಲ್ಲಿ ತೊಡಗಿ ಕವನ, ಲೇಖನ ಬರಹಗಳು ಬರೆದಿದ್ದಾರೆ. ಮತ್ತು ೧೯೮೯ರಲ್ಲಿ `ವಿನಯ ಸಶ' ಎಂಬ ಕವನ ಸಂಕಲನ ಪ್ರಕಟಿಸಿದ್ದಾರೆ. ಇವರ ಬರಹಗಳು ಅನೇಕ ಕಡೆಗಳಲ್ಲಿ ಪ್ರಕಟವಾಗಿವೆ. ಸದ್ಯ ಇವರು ಭಾಲ್ಕಿಯ ಭೀಮನಗರದಲ್ಲಿ ವಾಸವಾಗಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ