ಶುಕ್ರವಾರ, ಜನವರಿ 10, 2025
ಡಾ.ರೋಳೆಕರ ನಾರಾಯಣ
`ದಾಸೋಹ ಮತ್ತು ಸರ್ವೋದಯ' ಎಂಬ ಸಂಶೋಧನಾ ಕೃತಿಯ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡ ಲೇಖಕರೆಂದರೆ ಡಾ.ರೋಳೆಕರ್ ನಾರಾಯಣ. ಇವರು ಬೀದರ ಜಿಲ್ಲೆ ಬಸವಕಲ್ಯಾಣ ತಾಲೂಕಿನ ನಿರಗುಡಿ ಗ್ರಾಮದ ದೇವರಾಯ ಮತ್ತು ಶಿವಮ್ಮ ದಂಪತಿಗಳಿಗೆ ದಿನಾಂಕ ೨-೮-೧೯೬೫ರಲ್ಲಿ ಜನಿಸಿದ್ದಾರೆ. ಎಂ.ಎ. ಬಿ.ಇಡಿ.ಪಿ.ಎಚ್.ಡಿ. ಪದವಿಧರರಾದ ಇವರು ೧೯೯೨ರಲ್ಲಿ ಯಾದಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ಸದ್ಯ ಕಲಬುರ್ಗಿಯ ಸರಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು `ದಾಸೋಹ ಸೂತ್ರಗಳು' ಎಂಬ ವಿಮರ್ಶಾ ಕೃತಿಯೊಂದನ್ನು ಹೊರತಂದಿದ್ದಾರೆ. ಹಾಗೂ `ಕಥಾ ಕುಸುಮ', `ಕಥಾ ಸಂಗ್ರಹ', `ಹಳೆಗನ್ನಡ ಕಾವ್ಯ ಸಂಗ್ರಹ', `ವಚನ ಕೀರ್ತನ ಸಂಗ್ರಹ' ಎಂಬ ಕೃತಿಗಳನ್ನು ಸಂಪಾದಿಸಿದ್ದಾರೆ. ಅವು ಗುಲ್ಬರ್ಗ ವಿಶ್ವವಿದ್ಯಾಲಯದ ಬಿ.ಎ. ಬಿ.ಕಾಂ. ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳಾಗಿವೆ. ಮತ್ತು ಇವರು ಬರೆಹಗಳು ಕೆಲ ಪತ್ರಿಕೆ ಹಾಗೂ ಆಕಾಶವಾಣಿ, ದೂರದರ್ಶನಗಳಲ್ಲಿ ಪ್ರಕಟ, ಪ್ರಸಾರವಾಗಿವೆ.
ಇವರು ಮಹಾರಾಷ್ಟ್ರ ಸರ್ಕಾರದ ಮಾಧ್ಯಮಿಕ ಶಿಕ್ಷಣ ಮಂಡಳಿಯ ೧೧ನೇ ಮತ್ತು ೧೨ನೇ ತರಗತಿಯ ಕನ್ನಡ ಪಠ್ಯ ಪುಸ್ತಕದ ಸಂಪಾದಕ ಮಂಡಳಿಯ ಸದಸ್ಯರಾಗಿ, ಸೋಲಾಪೂರ ವಿಶ್ವವಿದ್ಯಾಲಯ ಕನ್ನಡ ಸ್ನಾತಕ, ಸ್ನಾತಕೋತ್ತರ ವಿಭಾಗ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಚಿತ್ರದುರ್ಗದ ಮುರುಘರಾಜೇಂದ್ರ ಮಠದಿಂದ `ಶಿಕ್ಷಕ ರತ್ನ' ಪ್ರಶಸ್ತಿಯು ನೀಡಿ ಗೌರವಿಸಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ